ಮಂಗಳೂರಿನ ಇತಿಹಾಸದಲ್ಲೇ ಅತೀ ದೊಡ್ಡ ಡ್ರಗ್ ದಂಧೆ ಬಯಲಿಗೆ!

ಮಂಗಳೂರು : ಮಂಗಳೂರು ಕೇಂದ್ರ ಅಪರಾಧ ವಿಭಾಗ ದ ಪೊಲೀಸರು ಅತಿದೊಡ್ಡ ಡ್ರಗ್ ​ ಜಾಲ ಪತ್ತೆ ಹಚ್ಚಿದ್ದಾರೆ. ರಾಜ್ಯದ ವಿವಿಧಡೆ ಡ್ರಗ್​​ ಪೂರೈಕೆ ಮಾಡುತ್ತಿದ್ದ ನೈಜೀರಿಯಾ ಪ್ರಜೆಯನ್ನುಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆತನಿಂದ ಬರೋಬ್ಬರಿ ಆರು ಕೆ.ಜಿಯ ಆರು ಕೋಟಿ ರೂ. ಮೌಲ್ಯದ ಎಂಡಿಎಂ ಡ್ರಗ್ ವಶಪಡಿಸಿಕೊಂಡಿದ್ದಾರೆ. ಇದು ಮಂಗಳೂರು ನಗರ ಇತಿಹಾಸದಲ್ಲೇ ಅತೀ ದೊಡ್ಡ ಕಾರ್ಯಾಚರಣೆಯಾಗಿದೆ.

ಸಿಸಿಬಿ ಪೊಲೀಸರು ವಾರದ ಹಿಂದೆ ಹೈದರ್ ಅಲಿ ಎಂಬಾತನನ್ನು ವಶಕ್ಕೆ ಪಡೆದಿದ್ದರು. ಈತನನ್ನು ವಿಚಾರಣೆಗೆ ಒಳಪಡಿಸಿದಾಗ ನೈಜೀರಿಯಾ ಪ್ರಜೆಯ ಕೈವಾಡ ಇರುವುದು ತಿಳಿದುಬಂದಿದೆ. ನೈಜೀರಿಯಾ ಪ್ರಜೆಯ ಮಾಹಿತಿ ಕಲೆ ಹಾಕಿದ ಸಿಸಿಬಿ ಪೊಲೀಸರು ಆತ ಬೆಂಗಳೂರಿನಲ್ಲಿ ವಾಸವಿರುವುದು ತಿಳಿದಿದೆ. ಕೂಡಲೆ ಕಾರ್ಯಪ್ರವೃತರಾದ ಸಿಸಿಬಿ ಪೊಲೀಸರು ಬೆಂಗಳೂರಿಗೆ ತೆರಳಿ ನೈಜೀರಿಯಾ ಪ್ರಜೆಯನ್ನು ಬಂಧಿಸಿದ್ದಾರೆ. ನೈಜೀರಿಯಾ ಪ್ರಜೆ ಬಳಿ ಇದ್ದ 17 ಸಿಮ್ ಕಾರ್ಡ್​, ​ಆತನ ಪಾಸ್‌ಪೋರ್ಟ್ ಸಹಿತ ಎಲ್ಲ ದಾಖಲೆಗಳನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Font Awesome Icons

Leave a Reply

Your email address will not be published. Required fields are marked *