ಗರೀಬ್​ ಕಲ್ಯಾಣ್ ಯೋಜನೆಯಡಿ ಸಿಗುತ್ತಿದ್ದ ಫ್ರೀ ಅಕ್ಕಿ 2028ರವರೆಗೆ ವಿಸ್ತರಣೆ

ನವದೆಹಲಿ: ಪ್ರಧಾನ ಮಂತ್ರಿ ಮೋದಿ ಸರ್ಕಾರ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡಿದೆ. ಅವುಗಳಲ್ಲಿ ಗರೀಬ್ ಕಲ್ಯಾಣ್ ಯೋಜನೆ ಅಡಿಯಲ್ಲಿ ದೇಶಾದ್ಯಂತ ಬಡವರಿಗೆ ಉಚಿತವಾಗಿ ನೀಡಲಾಗುತ್ತಿದ್ದ 5 ಕೆಜಿ ಅಕ್ಕಿಯನ್ನು ಮುಂದಿನ ನಾಲ್ಕು ವರ್ಷಗಳ ಕಾಲ ಮುಂದುವರಿಸಲು ನಿರ್ಧಾರ ಮಾಡಲಾಗಿದೆ.

ಗರೀಬ್ ಕಲ್ಯಾಣ ಯೋಜನೆಯಡಿಯಲ್ಲಿ ಕೇಂದ್ರ ಸರ್ಕಾರ ಬಿಪಿಎಲ್ ಕಾರ್ಡ್​ದಾರರಿಗೆ 5 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡುತ್ತಿತ್ತು. ಅದು ಮುಂದಿನ ನಾಲ್ಕು ವರ್ಷಗಳ ಕಾಲ ಅಂದ್ರೆ 2028ರವರೆಗೂ ವಿಸ್ತರಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾಕ್ಕೆ ಬರಲಾಗಿದೆ. ಈ ಬಗ್ಗೆ ಮಾತನಾಡಿರುವ ಕೇಂದ್ರ ಸಚಿವ ಅಶ್ವಿನ್ ವೈಷ್ಣವ್. ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು ಮುಂದಿನ ನಾಲ್ಕು ವರ್ಷಗಳ ಕಾಲ ಮುಂದುವರಿಸಲು ಸರ್ಕಾರ ನಿರ್ಧರಿಸಿದೆ. ಈ ಯೋಜನೆಗೆ ತಗಲುವ ವೆಚ್ಚ ಒಟ್ಟು 17,082 ಕೋಟಿ ರೂಪಾಯಿಯನ್ನು ಕೇಂದ್ರ ಸರ್ಕಾರವೇ ಭರಿಸಲಿದೆ ಎಂದು ಹೇಳಿದ್ದಾರೆ.

ಸರ್ಕಾರದ ಈ ಒಂದು ಯೋಜನೆ ಆರ್ಥಿಕವಾಗಿ ಹಿಂದುಳಿದಿರುವ ಪ್ರಜೆಗಳ ಕಲ್ಯಾಣ ಅವರ ಆರೋಗ್ಯ ವೃದ್ಧಿಯ ಮೇಲೆ ಒಳ್ಳೆಯ ಪರಿಣಾಮ ಬೀರಲಿದೆ ಎಂದು ನಂಬಿದ್ದೇವೆ ಎಂದು ಅಶ್ವಿನಿ ವೈಷ್ಣವ್ ಹೇಳಿದ್ದಾರೆ. 2020ರಲ್ಲಿ ಕೋವಿಡ್ ಸಮಯದಲ್ಲಿ ದೇಶದಾದ್ಯಂತ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ನೆರವಿಗೆ ನಿಲ್ಲಲು ಈ ಒಂದು ಯೋಜನೆಯನ್ನು ಖುದ್ದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೇ ಘೋಷಿಸಿದ್ದರು.

ಅಂದಿನಿಂದ ಇಂದಿನವರೆಗೂ ಇದನ್ನು ಚಾಚು ತಪ್ಪದೇ ಕೇಂದ್ರ ಸರ್ಕಾರ ಪಾಲಿಸಿಕೊಂಡು ಬಂದಿದೆ. ಇಂದು ನಡೆದ ಕ್ಯಾಬಿನೆಟ್ ಸಭೆಯಲ್ಲಿ ಈ ಯೋಜನೆಯನ್ನು ಮುಂದಿನ ನಾಲ್ಕು ವರ್ಷಗಳ ಕಾಲ ಮುಂದುವರಿಸಲು ನಿರ್ಧಾರ ಮಾಡಲಾಗಿದೆ. 2028ರವರೆಗೆ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿಯಲ್ಲಿ 5 ಕೆಜಿ ಅಕ್ಕಿ ಉಚಿತವಾಗಿ ದೊರಕುವುದಂತೂ ನಿಶ್ಚಿತವಾಗಿದೆ.

Font Awesome Icons

Leave a Reply

Your email address will not be published. Required fields are marked *