ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆಗೆ ಶರಣು » Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್


ರಾಮನಗರ,ಅಕ್ಟೋಬರ್,10,2024 (www.justkannada.in):  ದನದ ಕೊಟ್ಟಿಗೆಯಲ್ಲಿ ದಂಪತಿಗಳಿಬ್ಬರು  ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ  ಘಟನೆ ರಾಮನಗರ ಜಿಲ್ಲೆ, ಚನ್ನಪಟ್ಟಣ ತಾಲ್ಲೂಕಿನಲ್ಲಿ ನಡೆದಿದೆ.

ಚನ್ನಪಟ್ಟಣ ತಾಲೂಕಿನ ಕರ್ಲಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ರಾಜು (34) ಲಕ್ಷ್ಮೀ (30 ) ನೇಣಿಗೆ ಶರಣಾದ ದಂಪತಿಗಳು.  ರಾಜು ಹಾಗೂ ಲಕ್ಷ್ಮೀ ಕಳೆದ ಐದು ವರ್ಷದ ಹಿಂದೆ ಮದುವೆಯಾಗಿದ್ದು ಇವರಿಗೆ ಮೂರು ವರ್ಷದ ಹೆಣ್ಣುಮಗುವಿದೆ.

ಈ ನಡುವೆ ದಂಪತಿ ಸಾಲದ ಸುಳಿಯಲ್ಲಿ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂಬ ಶಂಕೆ ವ್ಯಕ್ತವಾಗಿದೆ. ಮನೆಯ ದನದ ಕೊಟ್ಟಿಗೆಯಲ್ಲಿ ನೇಣಿಗೆ ಕೊರಳೊಡ್ಡಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಅಕ್ಕೂರು ಠಾಣಾ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಾಗಿದೆ.

Key words:  couple, committed, suicide, hanging

Font Awesome Icons

Leave a Reply

Your email address will not be published. Required fields are marked *