ಕೋವಿಡ್ ಹಗರಣ ತನಿಖೆಗೆ SIT ರಚಿಸಲು ಸರ್ಕಾರ ತೀರ್ಮಾನ » Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್





ಬೆಂಗಳೂರು, ಡಿಸೆಂಬರ್,10,2024 (www.justkannada.in): ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ  ಕೋವಿಡ್ ಹಗರಣ ಸಂಬಂಧಿಸಿದಂತೆ ತನಿಖೆ ನಡೆಸುವುದಕ್ಕಾಗಿ ಎಸ್ ಐ ಟಿ ರಚಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಇಂದು ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ  ನಿರ್ಧಾರ ಕೈಗೊಳ್ಳಲಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ 40% ಕಮಿಷನ್ ಆರೋಪ ಹಾಗೂ ಕೋವಿಡ್ ಹಗರಣ ಆರೋಪ ಕೇಳಿ ಬಂದಿತ್ತು. ಇದೀಗ ೀ ಹಗರಣ ಕುರಿತು ನ್ಯಾಯಾಂಗ ತನಿಖೆ ನಡೆಸಲು ರಾಜ್ಯ ಕಾಂಗ್ರೆಸ್ ಸರ್ಕಾರವು ಎರಡು ಪ್ರತ್ಯೇಕ ಆದೇಶ ಹೊರಡಿಸಿತ್ತು.

ಕೋವಿಡ್ ಸಂದರ್ಭದಲ್ಲಿ ಖರೀದಿ ಅಕ್ರಮ ಅಪಾದನೆ ಕುರಿತಂತೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ನೇತೃತ್ವದಲ್ಲಿ ವಿಚಾರಣಾ ಆಯೋಗವನ್ನು ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಇದೀಗ  ರಾಜ್ಯ ಸರ್ಕಾರ ಕೋವಿಡ್ ಹಗರಣ ತನಿಖೆಗೆ ಎಸ್ ಐಟಿ ರಚಿಸಲು ಇಂದಿನ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

Key words: Govt, form,  SIT, investigate,  Covid scam






Previous articleಸ್ವಪಕ್ಷದಲ್ಲೇ ಸಿಎಂ ಬದಲಾವಣೆ ಬಗ್ಗೆ ಚರ್ಚೆ: ಸಚಿವರ ವಿರುದ್ದ ಸಿಎಂ ಸಿದ್ಧರಾಮಯ್ಯ ಗರಂ


Font Awesome Icons

Leave a Reply

Your email address will not be published. Required fields are marked *