ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: KPTCL ನೇಮಕಾತಿ: 2,975 ಹುದ್ದೆಗಳಿಗೆ ಅರ್ಜಿ ಆಹ್ವಾನ » Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್


ಬೆಂಗಳೂರು,ಅಕ್ಟೋಬರ್,17,2024 (www.justkannada.in): ಎಸ್ ಎಸ್ ಎಲ್ ಸಿ ಪಾಸ್ ಆಗಿ ಸರ್ಕಾರಿ ಹುದ್ದೆಗಾಗಿ   ಕಾಯುತ್ತಿರುವ ಆಕಾಂಕ್ಷಿಗಳಿಗೆ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕರ್ನಾಟಕ ವಿದ್ಯುತ್ ನಿಗಮ ನಿಯಮಿತ(KPTCL) ನಲ್ಲಿ 2975 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ.

ಕರ್ನಾಟಕ ವಿದ್ಯುತ್ ನಿಗಮ ನಿಯಮಿತ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಕ್ಟೋಬರ್ 21 ರಿಂದ 20/11/2024ರ ತನಕ ಅರ್ಜಿಗಳನ್ನು ಸಲ್ಲಿಕೆ ಮಾಡಲು ಅವಕಾಶ ನೀಡಲಾಗಿದೆ.

ಈ ಕುರಿತು ಅಧಿಸೂಚನೆ ಹೊರಡಿಸಲಾಗಿದ್ದು ಸಂಪೂರ್ಣ ವಿವರ ಈ ಕೆಳಕಂಡಂತಿದೆ..

ನೇಮಕಾತಿ ಅಧಿಸೂಚನೆಯು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿ 411 (380 + 31 ಬ್ಯಾಕ್ಲಾಗ್) ಕಿರಿಯ ಸ್ಟೇಷನ್ ಪರಿಚಾರಕ ಮತ್ತು 81 (75 + 6 ಬ್ಯಾಕ್ಲಾಗ್) ಕಿರಿಯ ಪವರ್ಮ್ಯಾನ್ ಹುದ್ದೆಗಳನ್ನು ಹಾಗೂ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ 2,268 (1818 + 450 ಬ್ಯಾಕ್ಲಾಗ್) ಕಿರಿಯ ಪವರ್ ಮ್ಯಾನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ, ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ, ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ, ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ, ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪನಿ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ಅಭ್ಯರ್ಥಿಗಳು ಅರ್ಜಿಯನ್ನು ಆನ್ಲೈನ್ ಮುಖಾಂತರ ದಿನಾಂಕ 21.10.2024 ರಿಂದ 20.11.2024 ರವರೆಗೆ ಸಲ್ಲಿಸಬಹುದಾಗಿರುತ್ತದೆ.

ಅರ್ಜಿ ಶುಲ್ಕಗಳು..

ಸಾಮಾನ್ಯ ವರ್ಗದ ಅಭ್ಯರ್ಥಿಗಳು 590 ರೂ. (ಜಿಎಸ್ಟಿ ಸೇರಿ), ಪ್ರವರ್ಗ -1, 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳು 614 ರೂ., ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ ಅಭ್ಯರ್ಥಿಗಳು 378 ರೂ. ಶುಲ್ಕ ಪಾವತಿಸಬೇಕು. ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ಅರ್ಹತೆ ಮತ್ತು ಅಗತ್ಯ ವಿದ್ಯಾರ್ಹತೆ: ಎಸ್.ಎಸ್.ಎಲ್.ಸಿ. ಅಥವಾ 10ನೇ ತರಗತಿಯ (ಸಿ.ಬಿ.ಎಸ್.ಇ/ ಐ.ಸಿ.ಎಸ್.ಇ) ಪರೀಕ್ಷೆಯನ್ನು ಕರ್ನಾಟಕ ರಾಜ್ಯದ ವಿದ್ಯಾಸಂಸ್ಥೆಗಳಿಂದ ತೇರ್ಗಡೆ ಹೊಂದಿರುವಂತಹ ಅಭ್ಯರ್ಥಿಗಳು ಮಾತ್ರ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅರ್ಹರಾಗಿರುತ್ತಾರೆ.  ಬಾಹ್ಯ ಅಥವಾ ಮುಕ್ತ ವಿಶ್ವವಿದ್ಯಾಲಯ ಅಥವಾ ಮುಕ್ತ ಶಾಲೆಯಿಂದ ಪಡೆದ ಎಸ್.ಎಸ್.ಎಲ್.ಸಿ./ 10ನೇ ತರಗತಿ (ಬ್ರಿಡ್ಜ್ ಕೋರ್ಸ್) ಉತ್ತೀರ್ಣತೆಯನ್ನು ನೇಮಕಾತಿಗೆ ಪರಿಗಣಿಸಲಾಗುವುದಿಲ್ಲ. ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು, ಅಭ್ಯರ್ಥಿಗಳು ಈ ಮೇಲೆ ನಿಗದಿಪಡಿಸಿರುವ ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಉತ್ತೀರ್ಣಗೊಂಡಿರತಕ್ಕದ್ದು ಹಾಗೂ ಅಂಕಪಟ್ಟಿಯನ್ನು ಹೊಂದಿರತಕ್ಕದ್ದು.

ವಯೋಮಿತಿ: ಅರ್ಜಿ ಸಲ್ಲಿಕೆ ಮಾಡಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು ಈ ಕನಿಷ್ಠ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ ವಯೋಮಿತಿಯನ್ನು ಮೀರಿರಬಾರದು. ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ಕನಿಷ್ಠ ವಯೋಮಿತಿ 18 ವರ್ಷಗಳು. ಗರಿಷ್ಠ ವಯೋಮಿತಿ ಸಾಮಾನ್ಯ ವರ್ಗಕ್ಕೆ 35 ವರ್ಷಗಳು, ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ 38 ವರ್ಷಗಳು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ ಹಾಗೂ ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷಗಳು.

ವೇತನ: ಕ್ರೋಢೀಕೃತ ಸಂಭಾವನೆ (ಮೊದಲ 3 ವರ್ಷಗಳು) 1ನೇ ವರ್ಷ 17,000 ಮಾಸಿಕ, 2ನೇ ವರ್ಷ 19,000 ಮಾಸಿಕ ಮತ್ತು 3ನೇ ವರ್ಷ 21,000 ಮಾಸಿಕ. ಮೂರು ವರ್ಷದ ತರಬೇತಿಯನ್ನು ತೃಪ್ತಿಕರವಾಗಿ ಪೂರೈಸಿದ ನಂತರ ಅಭ್ಯರ್ಥಿಗಳನ್ನು ವೇತನ ಶ್ರೇಣಿ 28550- 600(5)-31550-750(5)-35300-950(5)-40050-1200(5)-46050-1450(6)-54750-1650(5)-63000 ರಲ್ಲಿ ಎರಡು 2 ವರ್ಷಗಳ ಕಾಲ ಪರೀಕ್ಷಾರ್ಥ ಅವಧಿಯಲ್ಲಿ ಇರಿಸಲಾಗುವುದು.

Key words: KPTCL Recruitment, Applications, 2,975 Vacancies

Font Awesome Icons

Leave a Reply

Your email address will not be published. Required fields are marked *