ಕೆ.ವಾಸುದೇವ ಶೆಟ್ಟಿ – ನ್ಯೂಸ್ ಕರ್ನಾಟಕ ಕನ್ನಡ (News Karnataka Kannada)

ಕಾಪು: ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ವಾಸುದೇವ ಶೆಟ್ಟಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು, ಕ್ಷೇತ್ರದ ತಂತ್ರಿ ವಿದ್ವಾನ್ ಕೆ.ಪಿ. ಕುಮಾರಗುರು ತಂತ್ರಿ ನೇತೃತ್ವದಲ್ಲಿ ಪ್ರಧಾನ ಆರ್ಚಕ ವೇ.ಮೂ. ಶ್ರೀನಿವಾಸ ತಂತ್ರಿ ಉಪಸ್ಥಿತಿಯಲ್ಲಿ ವಾಗೀಶ್ವರಿ ಪೂಜೆ ಮತ್ತು ಲೇಖನ ಸಂಕಲ್ಪ ನೆರವೇರಲಿದೆ ಎಂದರು.

ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಹಾಗೂ ಮಾಣಿಲ ಶ್ರೀಮೋಹನದಾಸ ಪರಮಹಂಸ ಸ್ವಾಮೀಜಿ ನವದುರ್ಗಾ ಲೇಖನ ಬರೆಯುವ ಮೂಲಕ ಲೇಖನ ಪುಸ್ತಕ ಬಿಡುಗಡೆಗೊಳಿಸಿ ಆಶೀರ್ವಚನ ನೀಡಲಿದ್ದಾರೆ.

ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದು, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಮಾಜಿ ಶಾಸಕ ಲಾಲಾಜಿ. ಆರ್ ಮೆಂಡನ್, ನವದುರ್ಗಾ ಲೇಖನ ಯಜ್ಞ ಸಮಿತಿಯ ಅಧ್ಯಕ್ಷ ರಘುಪತಿ ಭಟ್, ಸ್ವರ್ಣ ಗದ್ದುಗೆ ಸಮರ್ಪಣಾ ಸಮಿತಿ ಅಧ್ಯಕ್ಷ ರವಿ ಸುಂದರ ಶೆಟ್ಟಿ ಉಪಸ್ಥಿತರಿರುವರು ಎಂದರು.

ಸೆ.3ರಂದು ಲೇಖನ ಬರೆಯುವ ಭಕ್ತರ ಹೆಸರು ನೋಂದಣಿ ಆರಂಭಗೊಂಡಿದ್ದು, ಭಕ್ತರಿಂದ ಪೂರಕ ಸ್ಪಂದನೆ ವ್ಯಕ್ತವಾಗುತ್ತಿದೆ. ಭಕ್ತರು ಬರೆದ ಲೇಖನ ಪುಸ್ತಕಗಳನ್ನು 45 ದಿನಗಳ ಒಳಗಾಗಿ ಪುನ‌ರ್ ಸಂಗ್ರಹಿಸಿ 2025ರ ಫೆ.4ರಂದು ಎಲ್ಲಾ ಪುಸ್ತಕಗಳನ್ನು ಪೂಜೆಗೆ ಇರಿಸಿ ಲೇಖನ ಬರೆದವರ ಹೆಸರು, ರಾಶಿ, ನಕ್ಷತ್ರವನ್ನು ಸಂಕಲ್ಪಿಸಿ ನವಚಂಡಿಕಾ ಯಾಗ ನಡೆಸಲಾಗುವುದು.

ಭಕ್ತರಿಂದ ಬರೆ ಯಿಸಿದ ಈ ಪುಸ್ತಕಗಳನ್ನು ಮಾರಿಗುಡಿಯಲ್ಲಿ ಶಾಶ್ವತವಾಗಿ ಶೇಖರಿಸಿ ಇಡಲಾಗುತ್ತಿದ್ದು, ಪ್ರತಿವರ್ಷ ನವರಾತ್ರಿ ದಿನ ವಾಗೀಶ್ವರಿ ಪೂಜೆಯ ಮೂಲಕ ಈ ಪುಸ್ತಕಗಳಿಗೆ ಪೂಜೆ ನಡೆಸಲಾಗುತ್ತದೆ ಎಂದರು. ನವದುರ್ಗಾ ಲೇಖನ ಯಜ್ಞ ಸಮಿತಿ ಅಧ್ಯಕ್ಷ ರಘುಪತಿ ಭಟ್ ನವದುರ್ಗಾ ಲೇಖನ ಯಜ್ಞ ಸಮಿತಿ ಕಾರ್ಯಾಧ್ಯಕ್ಷ ಕೃಷ್ಣಪ್ರಸಾದ್ ಅಡ್ಯಂತಾಯ, ಉಪಾಧ್ಯಕ್ಷ ಹರಿಯಪ್ಪ ಕೋಟ್ಯಾನ್, ಪ್ರಧಾನ ಕಾರ್ಯ ದರ್ಶಿ ಯೋಗೀಶ್ ವಿ.ಶೆಟ್ಟಿ ಬಾಲಾಜಿ, ಕೋಶಾಧಿಕಾರಿ ಕೆ.ವಿಶ್ವನಾಥ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Font Awesome Icons

Leave a Reply

Your email address will not be published. Required fields are marked *