ಸುಳ್ಳೇ ಬಿಜೆಪಿಯ ಮನೆ ದೇವರು: ‘’ವಾದಾ ದಿಯಾ- ಪೂರಾ ಕಿಯಾ’’: ಸಿ.ಎಂ.ಸಿದ್ದರಾಮಯ್ಯ ತಿರುಗೇಟು » Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್


ಬಳ್ಳಾರಿ, ನವೆಂಬರ್,7,2024 (www.justkannada.in): ಮಹಾರಾಷ್ಟ್ರದಲ್ಲಿ ಬಿಜೆಪಿ ಸುಳ್ಳಿನ ಜಾಹೀರಾತು ನೀಡುತ್ತಿದೆ. ಸುಳ್ಳೇ ಬಿಜೆಪಿಯ ಮನೆ ದೇವರು.  ವಾದಾ ದಿಯಾ: ಪೂರಾ ಕಿಯಾ ಎಂದು ಸಿ.ಎಂ ಸಿದ್ದರಾಮಯ್ಯ ತಿರುಗೇಟು ನೀಡಿದರು.

ಸಂಡೂರು ಚುನಾವಣಾ ಪ್ರಚಾರದ ವೇದಿಕೆಯಲ್ಲೇ ಮಾತನಾಡಿದ ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ದ ಗುಡುಗಿದರು. ಮಹಾರಾಷ್ಟ್ರದ ಬಿಜೆಪಿಯು  “ಕರ್ನಾಟಕ ಸರ್ಕಾರ ವಾದಾ ಕಿಯಾ: ಧೋಖಾ ದಿಯಾ” ಎಂದು ಸುಳ್ಳು ಜಾಹಿರಾತು ನೀಡಿದೆ. ಕರ್ನಾಟಕದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಭರವಸೆ ನೀಡಿತ್ತು. ಭರವಸೆ ಈಡೇರಿಸದೇ, ಯೋಜನೆಯನ್ನೇ ಇನ್ನೂ ಆರಂಭಿಸದೆ ವಂಚಿಸಿದೆ ಎನ್ನುವ ಅರ್ಥದ ಪರಮ ಸುಳ್ಳಿನ ಜಾಹಿರಾತುಗಳನ್ನು ಪುಟಗಟ್ಟಲೆ ನೀಡಿದೆ.  ಈ ಸುಳ್ಳಿನ ಜಾಹಿರಾತನ್ನು ಉಲ್ಲೇಖಿಸಿದ ಸಿಎಂ ಸಿದ್ದರಾಮಯ್ಯ ಅವರು ಅವರದೇ ಶೈಲಿಯಲ್ಲಿ ಉತ್ತರಿಸಿ, “ವಾದಾ ದಿಯಾ ಪೂರಾ ಕಿಯಾ” ಎಂದು ವ್ಯಂಗ್ಯವಾಗಿ ತಿರುಗೇಟು ನೀಡಿದರು.

“ಸುಳ್ಳೇ ಬಿಜೆಪಿಯ ಮನೆ ದೇವರು

ಬಿಜೆಪಿಯವರಿಗೆ ಸುಳ್ಳೇ ಮನೆ ದೇವರು. ರಾಜ್ಯದಲ್ಲಿ ಶಕ್ತಿ ಯೋಜನೆ ಸೇರಿದಂತೆ ಐದಕ್ಕೆ ಐದೂ ಗ್ಯಾರಂಟಿಗಳು ಯಶಸ್ವಿಯಾಗಿ ನಡೆದುಕೊಂಡು ಹೋಗುತ್ತಿದೆ. ಗೃಹಲಕ್ಷ್ಮಿಯ ಮುಂದಿನ ಕಂತಿನ ಹಣ ಒಂದೆರಡು ದಿನಗಳಲ್ಲೇ ಬಿಡುಗಡೆ ಕೂಡ ಆಗುತ್ತದೆ. ಆದರೆ ಬಿಜೆಪಿಯವರು ಸುಳ್ಳುಗಳನ್ನು ಹರಡಿಸುತ್ತಾ, ಸುಳ್ಳುಗಳನ್ನು ಹರಡುವುದಕ್ಕೇ ಕೋಟಿ ಕೋಟಿ ಖರ್ಚು ಮಾಡುತ್ತಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದರು.

ಮೋದಿ ಹೇಳಿದ್ದೇನು ? ಮಾಡಿದ್ದೇನು?

ವಿದೇಶದಲ್ಲಿರುವ ಕಪ್ಪುಹಣ ತಂದು ಎಲ್ಲರ ಖಾತೆಗೆ 15 ಲಕ್ಷ ಕೊಡ್ತೀವಿ ಅಂತ ಹೇಳಿದ್ರಲ್ಲಾ ಮೋದಿಯವರೇ ಕೊಟ್ರೇನ್ರೀ? ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡ್ತೀನಿ ಅಂದ್ರಲ್ಲಾ ಮೋದಿಯವರೇ, ಉದ್ಯೋಗ ಸೃಷ್ಟಿ ಮಾಡಿದ್ರಾ ? ಎಲ್ರೀ ಸ್ವಾಮಿ ನಿಮ್ಮ ಅಚ್ಚೆ ದಿನ್? ರೈತರ ಆದಾಯ ದುಪ್ಪಟ್ಟು ಮಾಡುತ್ತೇನೆ ಅಂದರಲ್ಲಾ ಮೋದಿಯವರೇ ಮಾಡಿದ್ರಾ ? ಮೋದಿ ಪ್ರಧಾನಿ ಆಗುವ ಮೊದಲು ದೇಶದ ಸಾಲ ಇದ್ದದ್ದು 54 ಲಕ್ಷ ಕೋಟಿ ಮಾತ್ರ ಇತ್ತು. ಈಗ ನಿಮ್ಮ ಅವಧಿಯಲ್ಲಿ ದೇಶದ ಸಾಲವನ್ನು 185 ಲಕ್ಷ ಕೋಟಿಗೆ ಏರಿಸಿದ್ದೀರಿ. ಇದೇನಾ ಸ್ವಾಮಿ ನಿಮ್ಮ ಅಚ್ಚೆ ದಿನ್ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದರು.

Key words: False, BJP, CM Siddaramaiah, Sandur

Font Awesome Icons

Leave a Reply

Your email address will not be published. Required fields are marked *