ಒಂದೇ ಒಂದು ಕರೆ ನೀಡಿದ್ರೆ ರಾಜ್ಯಾದ್ಯಂತ ಹೋರಾಟ ಆರಂಭ- ಸ್ನೇಹಮಯಿ ಕೃಷ್ಣ » Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್


ಮೈಸೂರು,ನವೆಂಬರ್,18,2024 (www.justkannada.in): ಮುಡಾ ಹಗರಣ ಸಂಬಂಧ ತಮ್ಮ ಹೋರಾಟವನ್ನ ಮೊದಲಿನಿಂದಲೂ ಹತ್ತಿಕ್ಕುವ ಕೆಲಸ‌ ಆಗ್ತಿದೆ. ಕೆಲವರು ಕರೆ ಮಾಡಿ ಪ್ರತಿಭಟನೆ ಮಾಡುವಂತೆ ಮನವಿ ಮಾಡಿದ್ದಾರೆ. ನಾನು ಒಂದೇ ಒಂದು ಕರೆ ನೀಡಿದರೆ ರಾಜ್ಯಾದ್ಯಂತ ಹೋರಾಟ ಆರಂಭವಾಗುತ್ತದೆ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಎಚ್ಚರಿಸಿದರು.

ಸ್ನೇಹಮಯಿ ಕೃಷ್ಣ ವಿರುದ್ಧ ಕಾಂಗ್ರೆಸ್ ವಕ್ತಾರ ಎಂ ಲಕ್ಷ್ಮಣ್ ದೂರು ದಾಖಲಿಸಿದ್ದರು. ಈ ಸಂಬಂಧ ದೇವರಾಜ ಠಾಣಾ ಪೋಲಿಸರು ಎಫ್ ಐಆರ್ ದಾಖಲಿಸಿಕೊಂಡು ಖುದ್ದು ವಿಚಾರಣೆಗೆ ಹಾಜರಾಗುವಂತೆ ಸ್ನೇಹಮಯಿ ಕೃಷ್ಣ  ಅವರಿಗೆ ನೋಟೀಸ್ ಜಾರಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ಸ್ನೇಹಮಯಿ ಕೃಷ್ಣ ಖುದ್ದು ಪೋಲಿಸರ ಮುಂದೆ ಹಾಜರಾದರು.

ಪೊಲೀಸರ ವಿಚಾರಣೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸ್ನೇಹಮಯಿ ಕೃಷ್ಣ,  ಸಿಎಂ ಸಿದ್ದರಾಮಯ್ಯ ಅವರನ್ನ ಕಂಡರೆ ಎಂ.ಲಕ್ಷ್ಮಣ್ ಗೆ ಕೋಪ. ತಮ್ಮ ಚುನಾವಣೆಯ ಸೋಲನ್ನ ಈ ರೀತಿ ತೀರಿಸಿಕೊಳ್ಳುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ತರುತ್ತಿರುವುದು ಲಕ್ಷ್ಮಣ್. ಲೋಕಸಭಾ ಚುನಾವಣೆಯ ಸೋಲಿನ ಸೇಡು ತೀರಿಸಿಕೊಳ್ಳುತ್ತಿದ್ದಾರೆ. ಹರಕೆಯ ಕುರಿ ಮಾಡಿದರು ಅಂತ ಸಿಎಂ ವಿರುದ್ಧ ಕುಪಿತಗೊಂಡಿರಬಹುದು. ಸಿಎಂ ವಿಚಾರದಲ್ಲಿ ಲಕ್ಷ್ಮಣ್ ಜಿಪಿಎ ತೆಗೆದುಕೊಂಡಿದ್ದಾರಾ? ಎಂದು ಪ್ರಶ್ನಿಸಿದರು.

ಪೊಲೀಸರ ವಿಚಾರಣೆಗೆ ಉತ್ತರ ನೀಡಿದ್ದೇನೆ. ಈ ಪ್ರಕರಣದಲ್ಲಿ ಲಕ್ಷ್ಮಣ್ ವಿರುದ್ಧವೇ ಕೇಸ್ ಬೀಳಲಿದೆ. ತಮ್ಮ ಹೋರಾಟವನ್ನ ಮೊದಲಿನಿಂದಲೂ ಹತ್ತಿಕ್ಕುವ ಕೆಲಸ‌ ಆಗ್ತಿದೆ. ಜಾಲತಾಣದಲ್ಲಿ ನನ್ನ ಪರ ಅಭಿಯಾನ ಆರಂಭವಾಗಿದೆ. ಕೆಲವರು ಕರೆ ಮಾಡಿ ಪ್ರತಿಭಟನೆ ಮಾಡುವಂತೆ ಮನವಿ ಮಾಡಿದ್ರು. ಒಂದೇ ಒಂದು ಕರೆ ನೀಡಿದರೆ ರಾಜ್ಯಾದ್ಯಂತ ಹೋರಾಟ ಆರಂಭವಾಗುತ್ತದೆ. ನಾನೇ ಯಾವುದು ಬೇಡ ಅಂತ ಸುಮ್ಮನಿದ್ದೀನಿ ಎಂದರು.

ಸಿಎಂ ಪತ್ನಿ ವಿಚಾರದಲ್ಲಿ ಸಂಸದ ಕುಮಾರ ನಾಯ್ಕ್ ಪಾತ್ರದ ವಿಚಾರ ಕುರಿತು ಪ್ರತಿಕ್ರಿಯಿಸಿದ ಸ್ನೇಹಮಯಿ ಕೃಷ್ಣ,  ಸಿಎಂ ತಪ್ಪೆಸಗುವುದಕ್ಕೂ, ಅಪರಾಧ ಮಾಡುವುದಕ್ಕೂ ವ್ಯತ್ಯಾಸವಿದೆ. ಸಿಎಂ ಮಾಡಿರುವುದು ತಪ್ಪಲ್ಲ, ಅಪರಾಧ. ಇದರಲ್ಲಿ ಸಂಸದ ಕುಮಾರನಾಯ್ಕ್ ಅವರ ಪಾತ್ರ ಕೂಡ ಇದೆ ಎಂದರು.

Key words: MUDA, Case, one call, struggle, start, Snehamayi Krishna

Font Awesome Icons

Leave a Reply

Your email address will not be published. Required fields are marked *