ಬೆಂಗಳೂರು : ಕರ್ನಾಟಕದಲ್ಲಿ ಹಿಂಗಾರು ಅವಧಿ ಮುಕ್ತಾಯವಾಗಿ ಚಳಿಗಾಲ ಪ್ರಾರಂಭವಾದರೂ, ರಾಜ್ಯದ ವಿವಿಧ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ರಾಜ್ಯದಲ್ಲಿ ಈ ತಿಂಗಳು ಸಹ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಡಿಸೆಂಬರ್ 3ರ ವರೆಗೂ ಸಹ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಅಂದಾಜಿಸಲಾಗಿದೆ.
ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು, ಹಾಸನ, ಮಂಡ್ಯ, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗುವ ಸಾಧ್ಯತೆ ಇದೆ.ಬಳ್ಳಾರಿ, ದಾವಣಗೆರೆ, ಶಿವಮೊಗ್ಗ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಚಿತ್ರದುರ್ಗ, ವಿಜಯನಗರ, ಬೆಳಗಾವಿ, ಉತ್ತರ ಕನ್ನಡ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
ಉತ್ತರ ಒಳನಾಡಿನ ವಿಜಯಪುರ, ಬಳ್ಳಾರಿ, ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಹುಬ್ಬಳ್ಳಿ, ಹಾವೇರಿ, ಚಿಕ್ಕಬಳ್ಳಾಪುರ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ, ವಿಜಯನಗರದಲ್ಲಿ ಹಾಗೂ ದಕ್ಷಿಣ ಒಳನಾಡಿನ ತುಮಕೂರು, ರಾಮನಗರ, ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ವರದಿ ಹೇಳಿದೆ
ಅಕಾಲಿಕ ಮಳೆಯಿಂದಾಗಿ ಕರ್ನಾಟಕದ ಹಲವು ಭಾಗದಲ್ಲಿ ರೈತರು ಬೆಳೆ ನಷ್ಟವನ್ನು ಅನುಭವಿಸಿದ್ದಾರೆ. ಇದೀಗ ಮತ್ತೆ ಮಳೆ ಮುನ್ಸೂಚನೆ ಸಿಕ್ಕಿದೆ. 25ರವರೆಗೆ ಮಳೆ ಮುಂದುವರಿಯಲಿದೆ ಎಂಬ ವಿಚಾರ ಮತ್ತಷ್ಟು ಆತಂಕ ಹೆಚ್ಚಿಸಿದೆ.