ಬೆಂಗಳೂರು,ಡಿಸೆಂಬರ್,3,2024 (www.justkannada.in): ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ನಗರಾಭಿವೃದ್ದಿ ಇಲಾಖೆಯ ಕಾರ್ಯದರ್ಶಿ ದೀಪಾ ಚೋಳನ್ ಜಾರಿ ನಿರ್ದೇಶನಾಲಯದ ಎದುರು ವಿಚಾರಣೆಗೆ ಹಾಜರಾಗಿದ್ದಾರೆ.
ಪ್ರಕರಣ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಮುಡಾ ದಾಖಲೆ ತಿದ್ದಿದ ಆರೋಪ ಮೇಲೆ ನಿನ್ನೆ ನಗರಾಭಿವೃದ್ದಿ ಇಲಾಖೆಯ ಕಾರ್ಯದರ್ಶಿ ದೀಪಾ ಚೋಳನ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು.
ಇದೀಗ ಬೆಂಗಳೂರಿನ ಶಾಂತಿನಗರದಲ್ಲಿರುವ ಜಾರಿ ನಿರ್ದೇಶನಾಲಯ ಕಚೇರಿಗೆ ದಾಖಲೆಗಳ ಸಮೇತ ದೀಪಾ ಚೋಳನ್ ವಿಚಾರಣೆಗೆ ಹಾಜರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
Key words: Muda case, IAS officer, Deepa Cholan, ED