ನ್ಯಾಯಾಲಯದ ಮಾತನ್ನೂ ಕೇಳುವುದಿಲ್ಲ ಎನ್ನುವ ಮೌಲಾನಾ ಮೇಲೆ FIR ಯಾವಾಗ? ಆರ್.ಅಶೋಕ್ ಕಿಡಿ » Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್


ಬೆಂಗಳೂರು,ಡಿಸೆಂಬರ್,3,2024 (www.justkannada.in): ನ್ಯಾಯಾಲಯದ ಮಾತನ್ನೂ ಕೇಳುವುದಿಲ್ಲ. ಸಂಸತ್ತು ನಿಮ್ಮದಾದರೆ, ಬೀದಿಗಳು ನಮ್ಮದು ಎಂದು ಹೇಳಿಕೆ ನೀಡಿರುವ ಮೌಲಾನಾ ಅಬು ತಾಲಿಬ್ ರೆಹಮಾನಿ ಅವರ ಮೇಲೆ ಎಫ್ ಐಆರ್ ಯಾವಾಗ ಹಾಕುತ್ತೀರಿ ಸಿಎಂ ಸಿದ್ದರಾಮಯ್ಯನವರೇ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಆರ್.ಅಶೋಕ್,  “ನ್ಯಾಯಾಲಯದ ಮಾತನ್ನೂ ಕೇಳುವುದಿಲ್ಲ. ಸಂಸತ್ತು ನಿಮ್ಮದಾದರೆ, ಬೀದಿಗಳು ನಮ್ಮದು” ಎಂದು ಧರ್ಮದ ಹೆಸರಿನಲ್ಲಿ ಸಮಾಜ ಒಡೆಯುವ ಮಾತುಗಳನ್ನು ಆಡಿರೋ ಮೌಲಾನಾ ಅಬು ತಾಲಿಬ್ ರೆಹಮಾನಿ ಅವರ ಮೇಲೆ FIR ಯಾವಾಗ ಹಾಕುತ್ತೀರಿ ಸಿಎಂ ಸಿದ್ದರಾಮಯ್ಯ ಹಾಗು ಡಿಸಿಎಂ ಡಿಕೆ ಶಿವಕುಮಾರ್ ಅವರೇ? ಎಂದು ಪ್ರಶ್ನಿಸಿದ್ದಾರೆ.

ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಒಬ್ಬ ಹಿಂದೂ ಸ್ವಾಮೀಜಿ ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿ, ಬಹಿರಂಗ ಕ್ಷಮೆ ಕೇಳಿದ ಮೇಲೂ ಅವರ ಮೇಲೆ FIR ಹಾಕಿ ವಿಚಾರಣೆಗೆ ಕರೆಯುವ ಕಾಂಗ್ರೆಸ್ ಸರ್ಕಾರಕ್ಕೆ, ಸಂವಿಧಾನ, ನ್ಯಾಯಾಲಯದ ಘನತೆ ಎಲ್ಲವನ್ನೂ ಗಾಳಿಗೆ ತೂರಿ ಪ್ರಚೋದನಕಾರಿ ಭಾಷಣ ಮಾಡುವ ಮುಸ್ಲಿಂ ಮತಾಂಧರು ನಿಮ್ಮ ಕಣ್ಣಿಗೆ ಕಾಣುವುದಿಲ್ಲ ಅಲ್ಲವೇ? ಎಂದು ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ಪಕ್ಷದ ಓಲೈಕೆ ರಾಜಕಾರಣವೇ ಅದಕ್ಕೆ ಮುಳುವಾಗಲಿದೆ. ಈಗಾಗಲೇ ದೇಶದ ಬಹುತೇಕ ರಾಜ್ಯಗಳಲ್ಲಿ ಅಡ್ರೆಸ್ ಇಲ್ಲದಂತಾಗಿರುವ ಹಿಂದೂ ವಿರೋಧ ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲೂ ನಿರ್ನಾಮ ಆಗುವ ದಿನ ಬಹಳ ದೂರವಿಲ್ಲ ಎಂದು ಹರಿಹಾಯ್ದಿದ್ದಾರೆ.

Key words: FIR, against ,Maulana, Abu Talib Rahmani, R. Ashok

Font Awesome Icons

Leave a Reply

Your email address will not be published. Required fields are marked *