‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಮೂಲಕ ಗಮನ ಸೆಳೆದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರು ಇದೀಗ ಮತ್ತೊಂದು ಸಿನಿಮಾ ನಿರ್ದೇಶನ ಮಾಡಿದ್ದಾರೆ. ಅದುವೇ ‘ದಿ ವ್ಯಾಕ್ಸಿನ್ ವಾರ್’. ಈ ಸಿನಿಮಾದ ಟ್ರೈಲರ್ ಸೆಪ್ಟೆಂಬರ್ 12ರಂದು ಅದ್ದೂರಿಯಾಗಿ ರಿಲೀಸ್ ಆಗಿದೆ. ವಿಶೇಷ ಅಂದರೆ, ಈ ಸಿನಿಮಾದಲ್ಲಿ ಕನ್ನಡದ ನಟಿ ಸಪ್ತಮಿ ಗೌಡ ಕೂಡ ವಿಜ್ಞಾನಿಯಾಗಿ ಕಾಣಿಸಿಕೊಂಡಿದ್ದಾರೆ.
ಅಂದ್ಹಾಗೆ ‘ದಿ ವ್ಯಾಕ್ಸಿನ್ ವಾರ್’ ಸಿನಿಮಾದಲ್ಲಿ ನಾನಾ ಪಾಟೇಕರ್, ಕಾಂತಾರ ನಟಿ ಸಪ್ತಮಿ ಗೌಡ, ಅನುಪಮ್ ಖೇರ್, ಪಲ್ಲವಿ ಜೋಷಿ ಸೇರಿದಂತೆ ಹಲವು ಮಂದಿ ಈ ಸಿನಿಮಾದಲ್ಲಿ ನಟಿಸಿದ್ದಾರೆ. ಇದು ಕೊರೊನಾ ವೈರಸ್ ವಿರುದ್ಧ ಭಾರತದ ವಿಜ್ಞಾನಿಗಳು ಲಸಿಕೆಯನ್ನು ಕಂಡು ಹಿಡಿಯುವ ಘಟನೆಗಳನ್ನು ಆಧರಿಸಿ ಸಿನಿಮಾ ಮಾಡಲಾಗಿದೆ.
ಟ್ರೈಲರ್ ರಿಲೀಸ್ ಆದಲ್ಲಿಂದ ಭಾರತದಲ್ಲಿ ಟ್ರೆಂಡಿಂಗ್ನಲ್ಲಿದೆ. ‘ಕಾಂತಾರ’ ಸಿನಿಮಾ ಮೂಲಕ ದೇಶಾದ್ಯಂತ ಸದ್ದು ಮಾಡಿರುವ ಕನ್ನಡದ ನಟಿ ಸಪ್ತಮಿ ಗೌಡ ‘ದಿ ವ್ಯಾಕ್ಸಿನ್ ವಾರ್’ನಲ್ಲಿ ವಿಜ್ಞಾನಿಯಾಗಿ ಕಾಣಿಸಿಕೊಂಡಿದ್ದಾರೆ. ‘ಕಾಂತಾರ’ ಬಳಿಕ ರಿಲೀಸ್ ಆಗಲಿರುವ 2ನೇ ಸಿನಿಮಾವಿದು. ಹೀಗಾಗಿ ಕನ್ನಡಿಗರಲ್ಲಿ ಸಪ್ತಮಿ ಗೌಡ ನಟನೆಯ ಮೊದಲ ಬಾಲಿವುಡ್ ನೋಡಲು ತುದಿಗಾಲಲ್ಲಿ ನಿಂತಿದ್ದಾರೆ.