ನವದೆಹಲಿ: ಬಾಲಿವುಡ್ ಹಿರಿಯ ನಟಿ ವಹೀದಾ ರೆಹಮಾನ್ ಈ ವರ್ಷದ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಜೀವಮಾನ ಸಾಧನೆ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಹಿರಿಯ ನಟಿ ವಹೀದಾ ರೆಹಮಾನ್ ಅವರನ್ನು ಈ ವರ್ಷದ ದಾದಾಸಾಹೇಬ್ ಫಾಲ್ಕೆ ಜೀವಮಾನ ಸಾಧನೆ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಈ ಬಗ್ಗೆ ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್ ಮಾಹಿತಿ ನೀಡಿದ್ದಾರೆ. ಹಿರಿಯ ನಟಿ ವಹೀದಾ ರೆಹಮನ್ ಅವರು ಭಾರತೀಯ ನಟಿ ಹಾಗು ಖ್ಯಾತ ನೃತ್ಯಗಾರ್ತಿ. ರೆಹಮಾನ್ ಅವರಿಗೆ 1972 ರಲ್ಲಿ ಭಾರತ ಸರ್ಕಾರವು ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಿತು, ನಂತರ ಇವರು 2011ರಲ್ಲಿ ಪದ್ಮಭೂಷಣವನ್ನು ಪಡೆದರು.