ನಿರ್ದೇಶಕ ಪ್ರಶಾಂತ್ ನೀಲ್ ಮತ್ತು ನಟ ಜೂನಿಯರ್ ಎನ್ಟಿಆರ್ ಅವರು ಒಟ್ಟಾಗಿ ಸಿನಿಮಾ ಮಾಡುತ್ತಾರೆ ಎಂಬ ಬಗ್ಗೆ ಬಹಳ ಹಿಂದೆಯೇ ಮಾಹಿತಿ ಸಿಕ್ಕಿತ್ತು. ಆದರೆ ಇದರ ಆಪ್ ಡೇಟ್ ಸಿಕ್ಕಿರಲಿಲ್ಲ. ಅದಕ್ಕೆ ಈಗ ನಿರ್ಮಾಪಕರಿಂದಲೇ ಅಧಿಕೃತ ಮಾಹಿತಿ ಹೊರಬಿದ್ದಿದೆ. ಈ ಸಿನಿಮಾಗೆ ‘ಮೈತ್ರಿ ಮೂವೀ ಮೇಕರ್ಸ್’ ಸಂಸ್ಥೆ ಬಂಡವಾಳ ಹೂಡುತ್ತಿದೆ. ಈ ಚಿತ್ರದ ಶೂಟಿಂಗ್ 2024ರ ಏಪ್ರಿಲ್ನಲ್ಲಿ ಶುರುವಾಗಲಿದೆ ಎಂದು ಈ ಸಂಸ್ಥೆಯ ಸೋಶಿಯಲ್ ಮೀಡಿಯಾ ಖಾತೆ ಮೂಲಕ ಪೋಸ್ಟ್ ಮಾಡಲಾಗಿದೆ.
ಈ ಸುದ್ದಿ ಕೇಳಿ ಜೂನಿಯರ್ ಎನ್ಟಿಆರ್ ಮತ್ತು ಪ್ರಶಾಂತ್ ನೀಲ್ ಅವರ ಅಭಿಮಾನಿಗಳಿಗೆ ಖುಷಿ ಆಗಿದೆ.‘ಇದು ಭಾರತೀಯ ಸಿನಿಮಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಸೃಷ್ಟಿ ಮಾಡಲಿದೆ’ ಎಂಬ ಕ್ಯಾಪ್ಷನ್ನೊಂದಿಗೆ ‘ಮೈತ್ರಿ ಮೂವೀ ಮೇಕರ್ಸ್’ ಸಂಸ್ಥೆಯು ಈ ಸುದ್ದಿಯನ್ನು ಹಂಚಿಕೊಂಡಿದೆ. ಆ ಮೂಲಕ ನಿರೀಕ್ಷೆ ಹೆಚ್ಚಿಸುವ ಕೆಲಸ ಮಾಡಲಾಗಿದೆ.
The most awaited project of @tarak9999 & #PrashanthNeel will commence in April, 2024 ❤️🔥
The prestigious high-octane spectacle will create a new benchmark in Indian Cinema 💥💥#NTRNeel 🔥@NANDAMURIKALYAN @NTRArtsOfficial pic.twitter.com/CxTPchxOPz
— Mythri Movie Makers (@MythriOfficial) October 5, 2023