EXCLUSIVE BREAKING NEWS: ಚಾಮುಂಡಿಬೆಟ್ಟ ಪ್ರಾಧಿಕಾರ : ತೀರ್ಮಾನ ಕೈಗೊಳ್ಳುವ ಮುನ್ನ ಕೋರ್ಟ್‌ ಪೂರ್ವಾನುಮತಿ ಕಡ್ಡಾಯ. » Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್


 

The High Court of Karnataka has issued an interim order directing the State Government to obtain prior permission of the High Court before taking any decision under Section 16 or 17 of the newly enacted Sri Chamundeshwari Development Authority (SCDA) Act.

ಬೆಂಗಳೂರು, 0CT,16,2024: (www.justkannada.in news) ‘ಮೈಸೂರಿನ  ಚಾಮುಂಡಿಬೆಟ್ಟ ನಿರ್ವಹಣೆಗೆಂದು ರಾಜ್ಯ ಸರಕಾರ ನೂತನವಾಗಿ ಅಸ್ಥಿತ್ವಕ್ಕೆ ತಂದಿರುವ “ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ “ (Sri Chamundeshwari Development Authority)  ಕಾಯ್ದೆಯ ಕಲಂ 16 ಅಥವಾ 17ರ ಅಡಿ ಯಾವುದೇ ತೀರ್ಮಾನ ಕೈಗೊಳ್ಳುವ ಮುನ್ನ ಹೈಕೋರ್ಟ್‌ನ ಪೂರ್ವಾನುಮತಿ ಪಡೆಯಬೇಕು ಎಂದು ಹೈಕೋರ್ಟ್‌ ಮಧ್ಯಂತರ ಆದೇಶ ಹೊರಡಿಸಿದೆ.

‘ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕಾಯ್ದೆ–2024 ಅನ್ನು ರದ್ದುಗೊಳಿಸಬೇಕು’ ಎಂದು ಕೋರಿ ರಾಜವಂಶ ಪ್ರಮೋದಾ ದೇವಿ ಒಡೆಯರ್ ಸಲ್ಲಿಸಿದ್ದ  ರಿಟ್‌ ಅರ್ಜಿ ವಿಚಾರಣೆ ಇಂದು ನಡೆಯಿತು. ಈ ವೇಳೆ ನ್ಯಾಯಮೂರ್ತಿ ಹೇಮಂತ ಚಂದನಗೌಡರ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿ ಈ ಆದೇಶ ಹೊರಡಿಸಿತು.

‘ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕಾಯ್ದೆಯನ್ನು (Sri Chamundeshwari Development Authority) ವಿಧಾನಸಭೆ ನಿಯಮಗಳಿಗೆ ವಿರುದ್ಧವಾಗಿ ಜಾರಿಗೊಳಿಸಲಾಗಿದೆಯೇ ಎಂಬುದನ್ನು ಪರಿಗಣಿಸಬೇಕಿದೆ. ಹಾಗಾಗಿ, ಅರ್ಜಿ ಇತ್ಯರ್ಥವಾಗುವವರೆಗೆ ಚಾಮುಂಡೇಶ್ವರಿ ದೇವಾಲಯದ ಚರ ಮತ್ತು ಸ್ಥಿರಾಸ್ತಿಗಳನ್ನು ಪ್ರಾಧಿಕಾರವು ವಿಲೇವಾರಿ ಮಾಡುವಂತಿಲ್ಲ. ಆದ್ದರಿಂದ, ದೇವಾಲಯದಲ್ಲಿ ಸದ್ಯ ಜಾರಿಯಲ್ಲಿರುವ ಸಂಪ್ರದಾಯಗಳಲ್ಲಿ ಯಾವುದೇ ಬದಲಾವಣೆ ಅಥವಾ ಹಸ್ತಕ್ಷೇಪ ಮಾಡಬಾರದು. ಕಾಯ್ದೆಯ ಕಲಂ 16 ಅಥವಾ 17ರ ಅಡಿಯಲ್ಲಿ ಏನೇ ತೀರ್ಮಾನ ಕೈಗೊಳ್ಳುವ ಮೊದಲಿಗೆ ನ್ಯಾಯಾಲಯದ ಪೂರ್ವಾನುಮತಿ ಪಡೆಯಬೇಕು’ ಎಂದು ನ್ಯಾಯಪೀಠ ರಾಜ್ಯ ಸರ್ಕಾರಕ್ಕೆ ತಾಕೀತು ಮಾಡಿದೆ.

‘ಅರ್ಜಿ ವಿಲೇವಾರಿಗೆ ಬಾಕಿ ಇರುವಾಗ ರಾಜ್ಯ ಸರ್ಕಾರ ನಿಯಮಗಳನ್ನು ರೂಪಿಸುವುದಕ್ಕೆ ಯಾವುದೇ ಅಡ್ಡಿ ಇರುವುದಿಲ್ಲ. ಆದರೆ, ಸಭೆಯಲ್ಲಿ ಭಾಗವಹಿಸುವಂತೆ ಪ್ರಮೋದಾ ದೇವಿ ಒಡೆಯರ್ ಅವರಿಗೂ ಪ್ರಾಧಿಕಾರ ನೋಟಿಸ್‌ ನೀಡಬೇಕು. ಅವರು ಸಭೆಯಲ್ಲಿ ಭಾಗವಹಿಸದೇ ಇದ್ದರೆ ಪ್ರಾಧಿಕಾರವು ಸೂಕ್ತ ನಿರ್ಧಾರ ಕೈಗೊಳ್ಳಲು ಸ್ವತಂತ್ರವಾಗಿರುತ್ತದೆ’ ಎಂದು ಆದೇಶದಲ್ಲಿ ವಿವರಿಸಲಾಗಿದೆ.

ಬಳಿಕ ಈ ವಿಚಾರಣೆಯನ್ನು ನವೆಂಬರ್‌ 22ಕ್ಕೆ ಮುಂದೂಡಲಾಯಿತು.

ಘಟನೆ ಹಿನ್ನೆಲೆ:

‘ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕಾಯ್ದೆ–2024, ಸಂವಿಧಾನದ 14, 19, 21, 25 ಮತ್ತು 26ನೇ ವಿಧಿಗಳ ಉಲ್ಲಂಘನೆಯಾಗಿದೆ’ ಎಂದು ಅರ್ಜಿದಾರರು ಆಕ್ಷೇಪಿಸಿದ್ದಾರೆ. ಅರ್ಜಿದಾರರ ಪರ ಸುಪ್ರೀಂ ಕೋರ್ಟ್‌ ವಕೀಲ ಜೆ.ಸಾಯಿ ದೀಪಕ್‌ ಹಾಗೂ ಸರ್ಕಾರದ ಪರ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ದೇವದಾಸ್‌ ವಾದ ಮಂಡಿಸಿದರು. ಪ್ರಕರಣದಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಮೈಸೂರು ಜಿಲ್ಲಾಧಿಕಾರಿಯನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿತ್ತು.

key words: Sri Chamundeshwari Development Authority, Court’s prior permission mandatory, before taking decision

SUMMARY:

The High Court of Karnataka has issued an interim order directing the State Government to obtain prior permission of the High Court before taking any decision under Section 16 or 17 of the newly enacted Sri Chamundeshwari Development Authority (SCDA) Act.

 

Font Awesome Icons

Leave a Reply

Your email address will not be published. Required fields are marked *