ಕಲಬುರಗಿ: ಕರ್ನಾಟಕ ಕ್ರಶ್, ಟಗರು ಪುಟ್ಟಿ ಎಂದೆಲ್ಲಾ ಖ್ಯಾತಿ ಪಡೆದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡದ ಸ್ಟಾರ್ ಆಟಗಾರ್ತಿ ಶ್ರೇಯಾಂಕ ಪಾಟೀಲ್ ಅವರಿಗೆ ತವರೂರಾದ ಕಲಬುರಗಿಯಲ್ಲಿ ಭರ್ಜರಿಯಾಗಿ ಸ್ವಾಗತ ಮಾಡಲಾಯಿತು.
RCB ತಂಡದ ಆಟಗಾರ್ತಿ ಶ್ರೇಯಾಂಕಾ ಪಾಟೀಲ್ ಅವರು ಸ್ವಂತ ಊರು ಜೇವರ್ಗಿ ತಾಲ್ಲೂಕಿನ ಕೋಳಕೂರು ಗ್ರಾಮಕ್ಕೆ ಹೋಗಿದ್ದಾರೆ. ಈ ವೇಳೆ ಹುಟ್ಟೂರಿಗೆ ಬಂದ ಶ್ರೇಯಾಂಕಾ ಪಾಟೀಲ್ಗೆ ಹೆಮ್ಮೆಯಿಂದ ಅದ್ಧೂರಿಯಾಗಿ ಬರಮಾಡಿಕೊಳ್ಳಲಾಯಿತು.
ಶ್ರೇಯಾಂಕಾ ಅವರ ಮೇಲೆ ಹೂ ಮಳೆ ಗೈದ ಗ್ರಾಮಸ್ಥರು ಶ್ರೀ ಸಿದ್ಧಬಸವೇಶ್ವರ ದೇವಸ್ಥಾನದವರೆಗೂ ಅದ್ಧೂರಿಯಾಗಿ ಮೆರವಣಿಗೆ ಮಾಡಿ ಸ್ವಾಗತಿಸಿದ್ದಾರೆ. ಬಳಿಕ ಸಿದ್ದಬಸವೇಶ್ವರ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ಶ್ರೇಯಾಂಕಾ ಪಾಟೀಲ್ಗೆ ಹಾಗೂ ಕುಟುಂಬಸ್ಥರಿಗೆ ಗ್ರಾಮಸ್ಥರು ಸನ್ಮಾನ ಮಾಡಿದ್ದಾರೆ. ಈ ವೇಳೆ ಮತ್ತಷ್ಟು ಉನ್ನತ ಮಟ್ಟಕ್ಕೆ ಶ್ರೇಯಾಂಕಾ ಪಾಟೀಲ್ ಬೆಳೆಯಲೆಂದು ಹಾರೈಸಿದ್ದಾರೆ.